Ad Widget .

ಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ

ಸಮಗ್ರ ನ್ಯೂಸ್: ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ರಾಮ ಮಂದಿರ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ಇಗಾಗಲೇ ಆರಂಭವಾಗಿವೆ. ಜನವರಿ 22 ರಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಇದಕ್ಕಾಗಿ ವಿವಿಧ ಕೈಂಕರ್ಯಗಳು ಜನವರಿ 16ರ ಬೆಳಗ್ಗೆಯಿಂದಲೇ ಆರಂಭವಾಗಿವೆ. ಈಗ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ.

Ad Widget . Ad Widget .

ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮ ಮಂದಿರ ನಿರ್ಮಾಣದ ಆವರಣಕ್ಕೆ ಮೆರವಣಿಗೆ ಮೂಲಕ ಸಾಗಿಸಲಾಗಿದೆ. ನಾಳೆ ಗರ್ಭಗುಡಿಯಲ್ಲಿ ಗೊತ್ತುಪಡಿಸಿದ ಆಸನದಲ್ಲಿ ರಾಮಲಲ್ಲಾ ಪ್ರತಿಮೆಯನ್ನು ಸ್ಥಾಪಿಸಲಾಗುತ್ತದೆ.
51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ.
ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ರಂದು ಅನಾವರಣಗೊಳಿಸಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *