Ad Widget .

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

Ad Widget . Ad Widget .

ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿದ್ದು, ಮಹೋತ್ಸವಕ್ಕೆ ಸಕಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

Ad Widget . Ad Widget .

ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Leave a Comment

Your email address will not be published. Required fields are marked *