Ad Widget .

ಜ. 23: ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಜ. 23ರಂದು ಸಮಯ 11:00 ರಿಂದ 03:00 ರವರೆಗೆ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget .

ಈ ಕುರಿತಂತೆ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ.ಎ ಹಿದಾಯತುಲ್ಲರವರು ಪ್ರಕಟಣೆ ಹೊರಡಿಸಿದ್ದು, ಜನತಾ ದರ್ಶನ ಕಾರ್ಯಕ್ರಮದ ಬಗ್ಗೆ ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದ್ದಾರೆ.

Ad Widget . Ad Widget .

ಈ ಜನತಾ ದರ್ಶನ ಕಾರ್ಯಕ್ರಮವನ್ನು ಸುಳ್ಯ ಹಾಗೂ ಕಡಬ ತಾಲೂಕಿನ ಕಾರ್ಯಕರ್ತರು ಹಾಗೂ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *