ಸಮಗ್ರ ನ್ಯೂಸ್: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು, ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿ ರಾಜಾ (18) ಎಂದು ಗುರುತಿಸಲಾಗಿದೆ.
ರಾಜಾ ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗಳಿಗೆ ಅದೇ ಜಿಲ್ಲೆಯ ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿದ್ದನು. ರಾಜಾ ಪ್ರತಿದಿನದಂತೆ ಇಂದು ಬೆಳಗ್ಗೆಯೂ ಕೋಚಿಂಗ್ ಸೆಂಟರ್ಗೆ ಬಂದು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ರಾಜಾ ಏಕಾಏಕಿ ತರಗತಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಎದೆಯಲ್ಲಿ ನೋವಿನಿಂದ ನರಳುತ್ತಾ ಕುಳಿತಲ್ಲೇ ಕುಸಿದು ಬಿದ್ದ. ಇದನ್ನು ಗಮನಿಸಿದ ಸಹ ವಿದ್ಯಾರ್ಥಿಗಳು ರಾಜಾ ಅವರನ್ನು ಎತ್ತಿ ಬೆಂಚಿನ ಮೇಲೆ ಕೂರಿಸಿದರು. ರಾಜ ಅದಾಗಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.
ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ರಾಜಾ ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ ಇಡೀ ಘಟನೆ ದಾಖಲಾಗಿದೆ.