Ad Widget .

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ/ ವಾಹನ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‍ನಲ್ಲಿ ಬೋಯಿಂಗ್ ಇಂಡಿಯಾ ಅಡ್ವಾನ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ ಅನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಜನವರಿ 19 ರಂದು ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಂಚಾರ ನಿಯಮಗಳನ್ನು ಬದಲಾಯಿಸಲಾಗಿದೆ.

Ad Widget . Ad Widget .

ಶುಕ್ರವಾರ ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬಿಐಇಟಿಸಿ ಕ್ಯಾಂಪಸ್ ತಲುಪಿ ಮಧ್ಯಾಹ್ನ 3.45ರವರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಬಳಿಕ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಪ್ರಯಾಣಿಸಲಿದ್ದಾರೆ. ಹೀಗಾಗಿ ನಾಳೆ ಹೆಣ್ಣೂರು-ಬಾಗಲೂರು ರಸ್ತೆ ಹಾಗೂ ಇತರ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ವಾಹನ ಸಂಚಾರ ನಿಷೇಧಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *