ಸಮಗ್ರ ನ್ಯೂಸ್: ಐವರ್ನಾಡು ದೇರಾಜೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದಾಗಿ ಜ.20 ರಂದು ಐವರ್ನಾಡು ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿದುಬಂದಿದೆ.

ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲು ಐವರ್ನಾಡು ಗ್ರಾಮಸ್ಥರು ಹಾಗೂ ನಾಗರಿಕ ಸೇವಾ ಸಮಿತಿಯವರು ಸಿದ್ಧತೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ರಸ್ತೆಗೆ ಆಗ್ರಹಿಸಿ ಮುಖ್ಯ ರಸ್ತೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರಿಗೆ, ರಾಜಕೀಯ ಮುಖಂಡರಿಗೆ , ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಯಾವುದೇ ಪ್ರಯೋಜನವಾಗದ ಕಾರಣ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.