ಸಮಗ್ರ ನ್ಯೂಸ್: ಗುಜರಾತ್ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿ ಒಟ್ಟು 14 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರಣಿ ಸರೋವರದ ದೋಣಿಯಲ್ಲಿ ನ್ಯೂ ಸನ್ರೈಸ್ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಯಾರೂ ಲೈಫ್ ಜಾಕೆಟ್ಗಳನ್ನು ಧರಿಸಿರಲಿಲ್ಲವಂತೆ. ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿ ಮುಳುಗಿ ಆರು ವಿದ್ಯಾರ್ಥಿಗಳು ಮೃತಪಟ್ಟಿರುವುದನ್ನು ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್ ಅವರು ಖಚಿತಪಡಿಸಿದ್ದಾರೆ. ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ದೋಣಿಯಲ್ಲಿ 27 ಮಕ್ಕಳಿದ್ದರು, ನಾವು ಇತರರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ವಡೋದರಾ ಜಿಲ್ಲಾಧಿಕಾರಿ ಎಬಿ ಗೋರ್ ಅವರು ಹೇಳಿದ್ದಾರೆ.