ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅನೇಕ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜನವರಿ 25, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಬಯೋಕೆಮಿಸ್ಟ್ರಿ/ ಬಯೋಟೆಕ್ನಾಲಜಿ/ ಲೈಫ್ ಸೈನ್ಸಸ್ ವಿಭಾಗದಲ್ಲಿ ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 25, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಮೈಸೂರು
ವೇತನ:
ಮಾಸಿಕ ₹ 25,000-31,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://patcell.cftri.res.in/
Apply here