Ad Widget .

ಸೋಮವಾರಪೇಟೆ: ಕೆರೆಗೆ ಬಿದ್ದ ಮಾರುತಿ ವ್ಯಾನ್|ಕಾರ್ಮಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ವ್ಯಾನ್ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಜ. 18ರಂದು ಸಂಜೆ ನಡೆದಿದೆ.

Ad Widget . Ad Widget .

ಅದೃಷ್ಟವಶಾತ್ ಅದರಲ್ಲಿದ್ದ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣಎಂಬವರು ತಮ್ಮ ತೋಟದಲ್ಲಿ ಕಕಾಫ ಕೊಯ್ಲು ಮುಗಿಸಿ ಸಂಜೆ ಮಾರುತಿ ಓಮಿನಿ ವ್ಯಾನ್ ನಲ್ಲಿ ಯಡೂರು ಮಾರ್ಗವಾಗಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಸೋಮವಾರಪೇಟೆ – ಶಾಂತಳ್ಳಿ ರಾಜ್ಯ ಹೆದ್ದಾರಿ ಬದಿಯಲ್ಲಿರುವ ಯಡೂರು ಕೆರೆಗೆ ಬಿದ್ದಿದೆ. ಮಾರುತಿ ವ್ಯಾನ್ ನಲ್ಲಿದ್ದವರು ಗಾಜನ್ನು ಒಡೆದು ಹೊರಬರುವ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಮದಲಾಪುರದ ಜ್ಯೋತಿ, ಲಕ್ಷ್ಮಿ, ಮನು, ಸೀತಮ್ಮ, ರತಿ ಅವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

Ad Widget . Ad Widget .

ಬೇಲಿ ಅಳವಡಿಸಲು ಒತ್ತಾಯ:
ಈ ಕೆರೆಯು ಅಪಾಯಕಾರಿಯಾಗಿ ರಸ್ತೆಯ ಅಂಚಿನಲ್ಲಿದ್ದು, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಯಾವುದೇ ಅವಘಡ ಸಂಭವಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕೆರೆಯ ಸುತ್ತ ಭದ್ರತಾ ಬೇಲಿ ಅಳವಡಿಸುವಂತೆ ಯಡೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *