Ad Widget .

ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಆಹ್ವಾನ| ಜ.21ರ ಅಯೋಧ್ಯೆಗೆ ಒಡೆಯರ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಇನ್ನು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು ಆಹ್ವಾನಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 21 ರಂದು ಅಯೋಧ್ಯೆಗೆ ತೆರಳುತ್ತಿದ್ದಾರೆ.

Ad Widget . Ad Widget .

ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ ಪ್ರತಿಷ್ಠದಲ್ಲಿ ಭಾಗಿಯಾಗುತ್ತಿರುವುದು ನನ್ನ ಸೌಭಾಗ್ಯ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ಇದು ತುಂಬಾ ಖುಷಿಯ ವಿಚಾರ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್‌ ಅವರು ನಮ್ಮ ಮೈಸೂರಿನವರು. ಅವರಿಗೆ ಅಭಿನಂದನೆ ತಿಳಿಸುವೆ. ರಾಮಲಲ್ಲಾ ಮೂರ್ತಿ ಕೆತ್ತಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದರು. ಅಯೋಧ್ಯೆ ಈ ಹಿಂದೆಯೂ ಪವಿತ್ರ ಧಾರ್ಮಿಕ ಕ್ಷೇತ್ರವಾಗಿತ್ತು. ಈಗಲೂ ಅದು ಅದೇ ರೀತಿ ಮುಂದುವರಿಯಲಿದೆ. ಇದು ಎಲ್ಲರಿಗೂ ಹೆಮ್ಮೆಯ ವಿಚಾರ ಎಂದು ಹೇಳಿದರು.

Ad Widget . Ad Widget .

Leave a Comment

Your email address will not be published. Required fields are marked *