ಬೆಳ್ತಂಗಡಿ: ಉದ್ಯಮಿ ಪತ್ನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.

Ad Widget ... ..

ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಗುರುವಾರ ಅಪರಾಹ್ನ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *