ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್

ಸಮಗ್ರ ನ್ಯೂಸ್: ಎಸ್​ಎಸ್​ಎಲ್​ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದು ತಡವಾಗಿ ಬೆಳಕಿಗೆ ಬಂದಿದೆ.

Ad Widget ... ..

ಈ ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಅಡಿ ದೂರು ದಾಖಲಾಗಿದೆ. ಹಾಗೇ ಬಾಲಕಿ ಹಾಸ್ಟೇಲ್ ನಲ್ಲಿದ್ದರೂ ಗಮನಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಹಾಗೂ ವಸತಿ ನಿಲಯದ ಪಾಲಕ ಸೇರಿ ಇಬ್ಬರನ್ನೂ ಅಮಾನತ್ತು ಮಾಡಲಾಗಿದೆ.

Ad Widget

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆಳಂದ ತಾಲೂಕಿನ ಗ್ರಾಮವೊಂದರ ವಸತಿ ಶಾಲೆಯಲ್ಲಿ ಇದ್ದ ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಹಾಸ್ಟೇಲ್ ಸಿಬ್ಬಂದಿ ಬಾಲಕಿಯನ್ನು ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದರು. ಹೊಟ್ಟೆ ನೋವು ತೀವ್ರವಾದಾಗ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ಪಾಲಕರು ಚಿಕಿತ್ಸೆ ಕೊಡಿಸಿದ್ದಾರೆ. ಸ್ಕ್ಯಾನಿಂಗ್ ನಲ್ಲಿ ಬಾಲಕಿ ಗರ್ಭಿಣಿಯಾಗಿರುವ ವಿಷಯ ಬಯಲಾಗಿದೆ. ಡಿಸೆಂಬರ್ 28ರಂದು ಬಾಲಕಿಗೆ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ

ಈ ಸ್ಥಿತಿಯಿಂದ ಮಗಳ ಪರಿಸ್ಥಿತಿ ಕಂಡು ಹೆತ್ತವರು ಕಣ್ಣೀರು ಇಟ್ಟಿದ್ದಾರೆ. ಆಕೆಯ ಸಹೋದರ (ದೊಡ್ಡಪ್ಪನ ಮಗ) ಕಾರಣ ಎಂಬ ವಿಚಾರ ಹೆತ್ತವರಿಗೆ ಹೆಚ್ಚಿನ ನೋವು ತಂದಿದೆ. ಆಸ್ಪತ್ರೆಯವರ ಮಾಹಿತಿ ಮೇರೆಗೆ ಕಲಬುರಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಯ ಈ ಸ್ಥಿತಿಗೆ ಕಾರಣವಾದ ಸಹೋದರ ಸಂಬಂಧಿ ಯುವಕನನ್ನು ಬಂಧಿಸಲಾಗಿದೆ.

Leave a Comment

Your email address will not be published. Required fields are marked *