Ad Widget .

ಕಡಬ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ ಆಲಂಕಾರು ಶಾಖೆ ಲೋಕಾರ್ಪಣೆ| ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನ ದುರ್ಗಾ ಟವರ್ಸ್ ನಲ್ಲಿ ಲೋಕಾರ್ಪಣೆಗೊಂಡಿತು.

Ad Widget . Ad Widget .

ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದರು.

Ad Widget . Ad Widget .

ಬಳಿಕ‌ ಮಾತನಾಡಿದ ಅವರು ಸಹಕಾರ ರಂಗದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಸೊಸೈಟಿ ಮಾದರಿಯಾಗಿದೆ. ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಸೊಸೈಟಿ ಪೂರಕವಾಗಿದೆ ಎಂದರು.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಗೆ ಚಾಲನೆ ನೀಡಿದರು.

ಆಲಂಕಾರು ಗ್ರಾ.ಪಂ. ಅಧ್ಯಕ್ಷ ಸುಶೀಲಾ ಗೌಡ ಪ್ರಥಮ ಠೇವಣಿ ಪತ್ರ ಹಾಗೂ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಿಸಿದರು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು, ಆಲಂಕಾರು ಶ್ರೀ ದುರ್ಗಾ ಟವರ್ಸ್ ನ ಮಾಲಕ ರಾಧಾಕೃಷ್ಣ ರೈ ಅವರು ಮುಖ್ಯ ಅತಿಥಿಗಳಾಗಿದ್ದರು.

Leave a Comment

Your email address will not be published. Required fields are marked *