ಸಮಗ್ರ ನ್ಯೂಸ್: ಸೀತಾರಾಮ ದೇವಾಲಯ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಸಮಾರಂಭದಲ್ಲಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು, ಜೈಶ್ರೀರಾಮ್ ಎನ್ನುವುದು ಯಾರೊಬ್ಬರ ಸ್ವತ್ತಲ್ಲ.
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದಿದ್ದಾರೆ.
ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ.ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ.
ಜೈ ಶ್ರೀರಾಮ್ ಎಂದಿದ್ದಾರೆ.