Ad Widget .

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

Ad Widget . Ad Widget .

ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ

Ad Widget . Ad Widget .

ಸಿಲಿಂಡರ್​ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *