Ad Widget .

ಜ.25ರಂದು ಕೊಡಗಿಗೆ ಸಿಎಂ ಭೇಟಿ| ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಪೊಲೀಸ್ ವರಿಷ್ಟ ಅಧಿಕಾರಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಭೂಮಿ ಪೂಜೆಯನ್ನು ನೆರವೇರಿಸಲು ಜ. 25ರಂದು ರಾಜ್ಯದ ಮುಖ್ಯಮಂತ್ರಿಗಳು ಕೊಡಗಿಗೆ ಆಗಮಿಸಲಿದ್ದಾರೆ.

Ad Widget . Ad Widget .

ಈ ಸಂದರ್ಭದಲ್ಲಿ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ವಿರಾಜಪೇಟೆಯ ಸೆಂಟೆನ್ಸ್ ಮೈದಾನದಲ್ಲಿ ವಿರಾಜ್ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಡೆಯಲಿದ್ದು, ನಂತರ ಮಡಿಕೇರಿಯಲ್ಲಿ ಆಯೋಜಿಸಲಾಗಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕೂಡ ಪಾಲ್ಗೊಳ್ಳಲಿದ್ದಾರೆ.

Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಆಗಮಿಸಲಿದ್ದಾರೆ. ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ವಿರಾಜಪೇಟೆಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ತಲುಪಲಿದ್ದಾರೆ.

Leave a Comment

Your email address will not be published. Required fields are marked *