ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ.

Ad Widget ... ..

ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.

Ad Widget

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು ಕೌಂಟರ್‌ಗಳನ್ನು ಸಿದ್ಧಗೊಳಿಸಲಾಗಿದ್ದು, ಒಟ್ಟು 11 ಕೌಂಟರ್‌ಗಳನ್ನು ತೆರೆಯಲಾ ಗಿದೆ ಎಂದು ಪ್ರಕಟನೆ ತಿಳಿಸಿದೆ.

Leave a Comment

Your email address will not be published. Required fields are marked *