Ad Widget .

ಮಡಿಕೇರಿ:ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರು ಹಾಗೂ ಸಿ.ಐ.ಟಿ.ಯು ನೇತೃತ್ವದಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜ. 23 ರಂದು ಪ್ರತಿಭಟನೆ ನಡೆಸಲಾಯಿತು.

Ad Widget . Ad Widget .

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ತಮ್ಮ ಕನಿಷ್ಠ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು, ಅಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11.500 ರೂ ಗೌರವ ಧನವನ್ನಷ್ಟೇ ಪಡೆಯುತ್ತಿದ್ದಾರೆ.

Ad Widget . Ad Widget .

2017ರ ಬಳಿಕ ಗೌರವದನ ಹೆಚ್ಚಳವಾಗಿಲ್ಲ ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಠ 31ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದವರಿಗೆ ಕನಿಷ್ಠ 10 ಸಾವಿರ ಪಿಂಚಣಿ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಬಿ. ಆರ್ ಭರತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಸಿ ಸಾಬು, ಪೊನ್ನಂಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ ಎಸ್ ಸುಮಿತ್ರ, ಮಡಿಕೇರಿ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಎಸ್ ಸರೋಜಾ, ಸೋಮವಾರಪೇಟೆ ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ ಬಿ ಜಮುನಾ, ವಿರಾಜಪೇಟೆ ತಾಲೂಕು ಅಧ್ಯಕ್ಷೆ ಎ ವಿ ಶೀಲಾ ಹಾಗೂ ಎಲ್ಲಾ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

Leave a Comment

Your email address will not be published. Required fields are marked *