Ad Widget .

ಆನೇಕಲ್ ನಲ್ಲಿ ಹೆಚ್ಚಾಯ್ತು ಸರಗಳ್ಳರ ಹಾವಳಿ… ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಮಗ್ರ ನ್ಯೂಸ್: ಆನೇಕಲ್​ನಲ್ಲಿ ಕಳೆದೊಂದು ತಿಂಗಳಿನಿಂದ ಸರಗಳ್ಳರ ಹಾವಳಿ ಮಿತಿಮೀರಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಿಕ್ಕ ಸಿಕ್ಕಲ್ಲಿ ಸರಗಳ್ಳತನ ನಡೆಯುತ್ತಿದೆ. ಅತ್ತಿಬೆಲೆ, ಸೂರ್ಯನಗರ, ಜಿಗಣಿ, ಆನೇಕಲ್ ನಲ್ಲಿ ಸರಣಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಸರಣಿ ಚೈನ್ ಸ್ನ್ಯಾಚಿಂಗ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದೆ.

Ad Widget . Ad Widget .

ಆನೇಕಲ್ ನಲ್ಲಿ ಪಲ್ಸರ್ ಎನ್ ಎಸ್ ಬೈಕ್​ನಲ್ಲಿ ಬರುವ ಖದೀಮರು ಮಹಿಳೆಯರ ಬಳಿ ಚಿನ್ನದ ಸರ ದೋಚಿ ಪರಾರಿಯಾಗುತ್ತಿದ್ದಾರೆ. ರಾಜಾರೋಷವಾಗಿ ಕತ್ತಿಗೆ ಕೈ ಹಾಕಿ ಸರ ಕಳ್ಳತನ ಮಾಡುತ್ತಿದ್ದಾರೆ. ಇದರಿಂದ ಜನರು ಬೆಚ್ಚಿಬಿದ್ದಿದ್ದು ಕಳ್ಳರನ್ನು ಹಿಡಿಯುವಂತೆ ಪಟ್ಟು ಹಿಡಿದಿದ್ದಾರೆ. ಬ್ಲಾಕ್ ಆ್ಯಂಡ್ ರೆಡ್ ಪಲ್ಸರ್ ಬೈಕ್ ನಲ್ಲಿ ಬಂದು ಚೈನ್ ಸ್ನ್ಯಾಚಿಂಗ್ ಮಾಡುತ್ತಿದ್ದಾರೆ. ಓರ್ವ ಹೆಲ್ಮೆಟ್ ಹಾಕಿದ್ರೆ ಮತ್ತೋರ್ವ ಮಂಕಿ ಕ್ಯಾಪ್ ಧರಿಸಿ ಕೃತ್ಯ ಎಸಗುತ್ತಿದ್ದಾರೆ. ಆರೋಪಿಗಳ ವಿರುದ್ಧ ನಾಲ್ಕು ಠಾಣೆಗಳಲ್ಲಿ ದೂರು ದಾಖಲಾಗಿದೆ. ಜಿಗಣಿ, ಸೂರ್ಯನಗರ ಮತ್ತು ಅತ್ತಿಬೆಲೆ ಹಾಗೂ ತಮಿಳುನಾಡಿನ ಹೊಸೂರಿನಲ್ಲಿ ದೂರು ದಾಖಲಾಗಿದೆ. ಪೊಲೀಸರು ಇವರ ಪತ್ತೆಗೆ ಹರಸಾಹಸ ಪಡುತ್ತಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *