Ad Widget .

ಇಂದು ಪಿಎಸ್​ಐ ಮರು ಪರೀಕ್ಷೆ| 117 ಪರೀಕ್ಷಾ ಕೇಂದ್ರದಲ್ಲಿ ಭದ್ರತೆ

ಸಮಗ್ರ ನ್ಯೂಸ್: ಇಂದು 545 ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್​ಐ) ನೇಮಕಾತಿ ಮರು ಪರೀಕ್ಷೆಯು ನಡೆಯುತ್ತಿದ್ದು, ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Ad Widget . Ad Widget .

ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸೂಚಿಸಿರುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​ ರಮ್ಯಾ ಅವರು ತಿಳಿಸಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಂತೆ ಪೂರ್ತಿ ಚೆಕ್ ಮಾಡಿ ಒಳಗೆ ಬಿಡಲಾಯಿತು. ಇನ್ನೂ ಫುಲ್ ಶರ್ಟ್ ಕೈ ಹಾಕಿದವರ ಬಟ್ಟೆ ಕೈ ಕತ್ತರಿಸಲಾಯಿತು, ಜೀನ್ಸ್ ಪ್ಯಾಂಟ್ ಬಳಕೆಯು ಇರಲಿಲ್ಲ. ಕಿವಿ ಓಲೆ, ಸರ, ತೆಗಿಸಲಾಯಿತು. ಮಾಂಗಲ್ಯ ಸರಕ್ಕೆ ಅವಕಾಶ ನೀಡಲಾಯಿತು.

Ad Widget . Ad Widget .

54 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಣಿ ಮಾಡಿಕೊಂಡಿದ್ದು, ಪರೀಕ್ಷೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮತ್ತು ಮಧ್ಯಾಹ್ನ 1ರಿಂದ 2.30ರ ವರೆಗೆ ನಡೆಯುತ್ತಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ನಾಲ್ವರು ಸಶಸ್ತ್ರ ಪೇದೆ ಮತ್ತು ಇಬ್ಬರು ಮಹಿಳಾ ಪೇದೆ ಸೇರಿದಂತೆ ಒಟ್ಟು 6 ಮಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

Leave a Comment

Your email address will not be published. Required fields are marked *