ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.

Ad Widget ... ..

ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು.

Ad Widget

ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇ ಬ್ರಿಜ್ಡ್ ಮೂಲಕ ಬನ್ನೂರು ಪಡೀಲ್‌ ಮೂಲಕ ಪುತ್ತೂರಿಗೆ ತೆರಳಬೇಕು. ಇತರ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗದಂತೆ ವಾಹನಗಳನ್ನು ನಿಲುಗಡೆ ಮಾಡಬೇಕು ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *