Ad Widget .

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ಪೊಲೀಸರು ಸೈಬರ್ ವಂಚನೆಯ ಇನ್ನೊಂದು ಮುಖವನ್ನು ಪತ್ತೆಹಚ್ಚಿದ್ದು ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಂದು ವೇಳೆ ನೀವು ವಾಟ್ಸ್​ಆ್ಯಪ್ ಪಿಂಕ್ ಇನ್​ಸ್ಟಾಲ್ ಮಾಡಿದ್ದೇ ಆದಲ್ಲಿ ಹ್ಯಾಕರ್​​ಗಳು ನಿಮ್ಮ ಫೋಟೊ, ಕಾಂಟ್ಯಕ್ಟ್​, ನೆಟ್​ ಬ್ಯಾಂಕಿಂಗ್ ಪಾಸ್ವರ್ಡ್​​ಗಳು, ಎಸ್​ಎಂಎಸ್​​ಗಳನ್ನು ಹ್ಯಾಕ್ ಮಾಡಲಿದ್ದಾರೆ ಎಂದು ಕರ್ನಾಟಕ ಪೊಲೀಸ್ ಎಚ್ಚರಿಕೆ ನೀಡಿದೆ. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ 1930 ಗೆ ಕರೆ ಮಾಡಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *