Ad Widget .

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಪತ್ತೆ ಹಚ್ಚಿದ್ದಾರೆ.

Ad Widget . Ad Widget .

ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು.

Ad Widget . Ad Widget .

ಪರಿಣವ್ ಬಳಿ ಸೀಮಿತ ನಗದು ಇದ್ದದುರಿಂದ ಅವನು ಹೇಗೆ ಹೈದರಾಬಾದ್ ತಲುಪಿದನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೋಷಕರು ಬಾಲಕನೊಂದಿಗೆ ಮಾತನಾಡಿದ್ದಾರೆ ಮತ್ತು ಅವನನ್ನು ಕರೆದುಕೊಂಡು ಬರಲು ತೆರಳುತ್ತಿದ್ದಾರೆ. ಪರಿಣವ್ ತಾಯಿ ನಿವೇದಿತಾ ಅವರು ತಮ್ಮ ಮಗ ಸುರಕ್ಷಿತ ಮತ್ತು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಹುಡುಗನ ಬಳಿ ಹಣವಿರಲಿಲ್ಲ. ಹಣಕ್ಕಾಗಿ ಆತ ವ್ಯಕ್ತಿಯೊಬ್ಬನಿಗೆ ತನ್ನ ಪಾರ್ಕರ್ ಪೆನ್ ಮಾರಾಟ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವುದು ಕಂಡುಬಂದಿದೆ ಎಂದು ಪರಿಣವ್ ತಂದೆ ಸುಕೇಶ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *