ಸಮಗ್ರ ಉದ್ಯೋಗ: Aeronautical Development Agency -ADA ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ವಿಭಾಗದಲ್ಲಿ ಪದವಿ, ಎಲ್ಎಲ್ಬಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 31, 2024ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು.
ವೇತನ:
ಮಾಸಿಕ ₹ 33,000-65,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಹಿರಿಯ ನಿರ್ವಾಹಕ ಅಧಿಕಾರಿ Gr-II
ನಿರ್ವಹಣೆ ಮತ್ತು ಮಾನವ ಸಂಪನ್ಮೂಲ ಇಲಾಖೆ
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ
ವಿಭೂತಿಪುರ
ಮಾರತಹಳ್ಳಿ ಅಂಚೆ
ಬೆಂಗಳೂರು-560037