Ad Widget .

ಫೆ.8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

ಸಮಗ್ರ ನ್ಯೂಸ್: ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಅವರು ‘ವ್ಯವಸ್ಥಿತ, ಶಿಸ್ತುಬದ್ದ, ಪರಿಣಾಮಕಾರಿ ಜನಸ್ಪಂದನೆಗೆ ಸಕಲ ತಯಾರಿಯ ಜೊತೆಗೆ ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಗಮನ ಹರಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇನ್ನೂ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದು, ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪನೆ ಮಾಡಲಾಗುವುದು. ಜೊತೆಗೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚನೆ ನೀಡಿದರು. ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.

Ad Widget . Ad Widget . Ad Widget .

ಇನ್ನು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಈ ವೇಳೆ ಹಾಜರಿರಲಿದ್ದಾರೆ. ವಿಶೇಷ ಆಸಕ್ತಿವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕು. ವಿಶೇಷ ಚೇತನರು ಹಾಗೂ ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡುವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ‘ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

Leave a Comment

Your email address will not be published. Required fields are marked *