Ad Widget .

ನಾಳೆ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ

ಸಮಗ್ರ ನ್ಯೂಸ್: ಡಿಸೆಂಬರ್​ 1ರಂದು ತೆರೆಕಂಡ ಸೂಪರ್​ ಹಿಟ್​ ಆದ ‘ಅನಿಮಲ್​’ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ ಎಂದು ಕೇಳುತ್ತಲೇ ಇದ್ದರು. ಈಗ ಎಲ್ಲರಿಗೂ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದಾರೆ.

Ad Widget . Ad Widget .

ಜ. 26ರಂದು ‘ಅನಿಮಲ್​’ ಸಿನಿಮಾ ಒಟಿಟಿಯಲ್ಲಿ ಲಭ್ಯವಾಗುತ್ತಿದೆ. ನೆಟ್​ಫ್ಲಿಕ್ಸ್​ (Netflix) ಮೂಲಕ ಈ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗುತ್ತಿದೆ. ರಣಬೀರ್​ ಕಪೂರ್​ ಅವರಿಗೆ ಈ ಚಿತ್ರದಿಂದ ಬಹು ದೊಡ್ಡ ಯಶಸ್ಸು ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಕೂಡ ಹೆಚ್ಚಾಗಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಡಿಮ್ಯಾಂಡ್​ ಡಬಲ್​ ಆಗಿದೆ.

Ad Widget . Ad Widget .

ಈ ಅನಿಮಲ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 555 ಕೋಟಿ ರೂಪಾಯಿಗೂ ಹೆಚ್ಚು ಕಮಾಯಿ ಮಾಡಿದೆ. ವಿಶ್ವ ಬಾಕ್ಸ್​ ಆಫೀಸ್​ನ ಲೆಕ್ಕವೂ ಸೇರಿದರೆ 900 ಕೋಟಿ ರೂಪಾಯಿ ಮೀರುತ್ತದೆ. ಈ ಸಿನಿಮಾ ಇಷ್ಟೆಲ್ಲ ಸದ್ದು ಮಾಡಲು ಹಲವು ಕಾರಣಗಳಿವೆ. ಬಿಡುಗಡೆ ಆದ ದಿನದಿಂದಲೇ ಈ ಸಿನಿಮಾ ವಿವಾದದ ಸುಳಿಗೆ ಸಿಲುಕಿತ್ತು. ಆದರೂ ಕೂಡ ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ‘ಅನಿಮಲ್​’ ಸಿನಿಮಾವನ್ನು ವಿಶ್ವಾದ್ಯಂತ ಇರುವ ಪ್ರೇಕ್ಷಕರು ನೋಡಬಹುದಾಗಿದೆ. ಒಟಿಟಿಯಲ್ಲಿ ನೋಡುವ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಕಾಯುತ್ತಿದ್ದಾರೆ.

Leave a Comment

Your email address will not be published. Required fields are marked *