Ad Widget .

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು.

Ad Widget . Ad Widget .

ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ ರುದ್ರಚಾಮುಂಡಿ ದೈವದ ನರ್ತನ ಸೇವೆ, ಬೂಳ್ಯ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯುತ್ತಿದೆ.

Ad Widget . Ad Widget .

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಅವರ ಅಧ್ಯಕ್ಷತೆಯಲ್ಲಿ ಸಂಜೆ 6.00ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಶ್ರಾಂತ ಅಧ್ಯಾಪಕ ಸದಾಶಿವ ಭಟ್ ಜೋಗಿಬೆಟ್ಟು ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಸಂಸದ ನಳೀನ್ ಕುಮಾರ್ ಕಟೀಲು, ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಪಾವನ ಜೋಗಿಬೆಟ್ಟು, ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಈ ಸಂಧರ್ಬದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7.00ರಿಂದ ಪ್ರಸಿದ್ಧ ಕಲಾವಿದರ ಕೊಡುವಿಕೆಯಲ್ಲಿ ಮರ್ಯಾದಾ ಪುರುಷೋತ್ತಮ ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ 9:00 ರಿಂದ ಅನ್ನಸಂತರ್ಪಣೆ ನಡೆಯಲಿದೆ.

ಜ. 29ರಂದು ಬೆಳಿಗ್ಗೆ 7.30 ಕ್ಕೆ ತಂಟೆಪಾಡಿ ಶಿರಾಡಿ ದೈವದ ಭಂಡಾರ ಹೊರಡುವುದು, ಬೆಳಿಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಬಂಡಾರ ಹೊರಡುವುದು ಮತ್ತು ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು ಕಲ್ಲಮಾಡದಲ್ಲಿ ಮೂರು ದೈವಗಳ ಕಾಲಾವಧಿ ನೇಮ(ತಿರ್ತನೇಮೊ), ಬೂಳ್ಯ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಬಳಿಕ 2.30ರಿಂದ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಡಲಿದೆ. ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿಹೊಳೆಯ ಸಮೀಪ ಬಲಿ ಸಮರ್ಪಣೆಗೊಳ್ಳಲಿದೆ.

Leave a Comment

Your email address will not be published. Required fields are marked *