Ad Widget .

ಬಿಹಾರದಲ್ಲಿ ಮುರಿದ ಮಹಾ ಘಟಬಂಧನ್| ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಸಮಗ್ರ ನ್ಯೂಸ್: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜೀನಾಮೇ ನೀಡಿದ್ದು, ಆರ್‌ಜೆಡಿ ಜತೆಗಿನ ಮೈತ್ರಿಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಆರ್‌ಜೆಡಿ ಹಾಗೂ ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ.

Ad Widget . Ad Widget .

ರವಿವಾರ ತಮ್ಮ ಬೆಂಬಲಿಗರ, ಶಾಸಕರ ಸಭೆ ನಡೆಸಿದ ನಿತೀಶ್‌ ಕುಮಾರ್‌ ಅವರು ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ನಿತೀಶ್‌ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Ad Widget . Ad Widget .

ಎನ್‌ಡಿಎ ತೊರೆದ 18 ತಿಂಗಳಲ್ಲೇ ನಿತೀಶ್ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಮರಳಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ನಾಲ್ಕನೇ ಬಾರಿಗೆ ನಿತೀಶ್‌ ಅವರು ರಾಜಕೀಯ ನಿರ್ಧಾರವನ್ನು ಬದಲಿಸಿ ಮತ್ತೆ ಪಲ್ಟು ಕುಮಾರ್‌ ಹೆಸರನ್ನು ಉಳಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *