ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್ ಸೈನ್ಸಸ್ನಲ್ಲಿ ಸ್ನಾತಕೋತ್ತರ ಪದವಿ, ಬಯಾಲಜಿಕಲ್ ಸೈನ್ಸಸ್/ಬಯೋಟೆಕ್ನಾಲಜಿಯಲ್ಲಿ ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
**ವೇತನ:
**ಮಾಸಿಕ ₹ 40,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಸಮಿತಿ ಕೊಠಡಿ
ಹಳೆಯ ರಿಜಿಸ್ಟ್ರಾರ್ ಕಛೇರಿಯ ಪಕ್ಕ
ಆಡಳಿತಾತ್ಮಕ ಬ್ಲಾಕ್
ನಿಮ್ಹಾನ್ಸ್
ಬೆಂಗಳೂರು-29