Ad Widget .

ಕನ್ನಡ ಮಾತನಾಡೋಕೆ ಬರುತ್ತಾ? ಹಾಗಾದ್ರೆ ಈ ಸರ್ಕಾರಿ ಉದ್ಯೋಗ ನಿಮಗಾಗಿ

ಸಮಗ್ರ ಉದ್ಯೋಗ: ದಾವಣಗೆರೆ ಸಿಟಿ ಕಾರ್ಪೊರೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 30, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ವಿದ್ಯಾರ್ಹತೆ:
ಯಾವುದೇ ವಿದ್ಯಾರ್ಹತೆ ಕೇಳಿಲ್ಲ. ಕನ್ನಡ ಭಾಷೆ ಮಾತನಾಡಲು ಬಂದರೆ ಸಾಕು.

Ad Widget . Ad Widget .

ವಯೋಮಿತಿ:
ದಾವಣಗೆರೆ ಸಿಟಿ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಹಾಕಲು ಯಾರು ಅರ್ಹರು?
ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ವೇತನ:
ಮಾಸಿಕ ₹ 17,000- 28,950

**ಉದ್ಯೋಗದ ಸ್ಥಳ:
**ದಾವಣಗೆರೆ

ಆಯ್ಕೆ ಪ್ರಕ್ರಿಯೆ:
ಕೆಲಸದ ಅನುಭವ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ದಾವಣಗೆರೆ ಮಹಾನಗರ ಪಾಲಿಕೆಯ ಪ್ರಧಾನ ಕಛೇರಿ
ರೈಲ್ವೆ ನಿಲ್ದಾಣದ ಎದುರು
ಪಿ.ಬಿ ರಸ್ತೆ
ದಾವಣಗೆರೆ
ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *