Ad Widget .

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

Ad Widget . Ad Widget .

ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಕರ್ನಾಟಕ ರಣಜಿ ತಂಡದ ಆಟಗಾರರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

Ad Widget . Ad Widget .

ಈ ವೇಳೆ ವಿಮಾನದಲ್ಲಿ ನೀರು ಕುಡಿದ ಮಯಾಂಕ್ ಅವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *