ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ… ಆಕ್ರೋಶದ ಬಳಿಕ ತೆರವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ವಿವಾದ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಾರಿಸಲಾದ ಹಸಿರು ಬಾವುಟವನ್ನು ಪೊಲೀಸರು, ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.

Ad Widget ... ..

ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ವಿಕಾಸ್ ವಿಕ್ಕಿ ಎನ್ನುವರು ಟ್ವೀಟ್‌ ಮಾಡಿದ್ದರು. ಈ ಬಾವುಟ ಯಾವ ಧರ್ಮದ್ದು ಎಂದು ‘ಕೈ’ ನಾಯಕರು ಉತ್ತರಿಸಬೇಕು. ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ. ಹಿಂದೂ ಗ್ರಾಮಸ್ಥರ ಮೇಲೆ ಮಾತ್ರ ನಿಮ್ಮ ಅಟ್ಟಹಾಸವೇ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಸಹ ಟ್ವೀಟ್ ಮಾಡಿ, ಪೂರ್ವ ವಿಭಾಗ ಡಿಸಿಪಿಯವರೇ ಶತ್ರು ದೇಶದ ಬಣ್ಣ ಹೋಲುವ ಧ್ವಜ ಹಾರಾಟ. ಸಾರ್ವಜನಿಕ ಪ್ರದೇಶದಲ್ಲಿ ಧ್ವಜ ನಿಯಮಕ್ಕೆ ವಿರುದ್ಧವಾದದ್ದು ಅಲ್ಲವೇ. ಶಿವಾಜಿನಗರ ಇರುವುದು ಭಾರತದಲ್ಲಿ, ಪಾಕಿಸ್ತಾನದಲ್ಲಿ ಅಲ್ಲ ಎಂದು ಬರೆದುಕೊಂಡಿದ್ದರು.

Ad Widget

ಇದೀಗ ಕೂಡಲೇ ಎಚ್ಚೆತ್ತ ಶಿವಾಜಿನಗರ ಪೊಲೀಸರು ಹಸಿರು ಬಾವುಟ ತೆಗೆದು ತ್ರಿವರ್ಣ ಧ್ವಜ ಹಾರಿಸಿದ್ದಾರೆ

Leave a Comment

Your email address will not be published. Required fields are marked *