Ad Widget .

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ.

Ad Widget . Ad Widget .

ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

Ad Widget . Ad Widget .

ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರ ಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಪುಷ್ಪಗಿರಿ ಬೆಟ್ಟಗಳು ಎಂದೂ ಕರೆಯಲ್ಪಡುವ ಕುಮಾರ ಪರ್ವತವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿದೆ. ಈ ಟ್ರೆಕ್ಕಿಂಗ್ ಸ್ಥಳವು ಅಪಾರ ಜನಪ್ರಿಯತೆಯನ್ನು ಗಳಿಸಿದೆ, ಹೆಚ್ಚಾಗಿ ಸಾಮಾಜಿಕ ಜಾಲತಾಣದ ಮಾನ್ಯತೆಯಿಂದ ಉತ್ತೇಜಿಸಲ್ಪಟ್ಟಿದೆ. ಪ್ರವಾಸಿಗರ ಭೇಟಿಯ ಉಲ್ಬಣವು ಒಂದು ನಿರ್ಣಾಯಕ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಈ ಹೊಸ ಖ್ಯಾತಿಯು ವರವೋ ಅಥವಾ ಶಾಪವೋ? ಎಂಬ ಪ್ರಶ್ನೆ ಎದ್ದಿದೆ.

ಏಕೆಂದರೆ ಜನವರಿ 26 ರಂದು, ಒಂದೇ ದಿನದಲ್ಲಿ 1,000 ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳನ್ನು ಈ ದಾರಿಯಲ್ಲಿ ವೀಕ್ಷಿಸಲಾಯಿತು. ಇದು ಪರಿಸರವಾದಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ.

ಈ ಹಿನ್ನಲೆಯಲ್ಲಿ ದಿನಕ್ಕೆ 600 ಮಂದಿಗಷ್ಟೇ ಚಾರಣಕ್ಕೆ ಅವಕಾಶ ನೀಡುವಂತೆ ಆನ್ ಲೈನ್ ಬುಕ್ಕಿಂಗ್ ನಡೆಸುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ಮತ್ತು ಸೋಮವಾರಪೇಟೆ ಕಡೆಯಿಂದ ತಲಾ 300 ಮಂದಿಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *