ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್

ಸಮಗ್ರ ನ್ಯೂಸ್: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಸ್ಪಷ್ಟಪಡಿಸಿದ್ದಾರೆ.

Ad Widget ... ..

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ

Ad Widget

ಈ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಅಧಿವೇಶನ ನಿಗದಿ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ನಾವು ಸುಗ್ರೀವಾಜ್ಞೆ ಕಳಿಸಿದಾಗ ಅಧಿವೇಶನ ನಿಗದಿಯಾಗಿರಲಿಲ್ಲ. ಸುಗ್ರೀವಾಜ್ಞೆ ರಾಜ್ಯಪಾಲರ ಕೈಸೇರುವ ವೇಳೆಗೆ ಅಧಿವೇಶನ ನಿಗದಿಯಾಗಿದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ರಾಜ್ಯಪಾಲರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

Leave a Comment

Your email address will not be published. Required fields are marked *