Ad Widget .

ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ|33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಈಗ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿದ್ದು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

Ad Widget . Ad Widget . Ad Widget . Ad Widget .

ಈ ಬಗ್ಗೆ ನಗರ ಪೊಲೀಸ್‌ ಆಯುಕ್ತರ ಪರವಾಗಿ ಐಪಿಎಸ್‌ ಅಧಿಕಾರಿ ರಮನ್‌ ಗುಪ್ತಾ ಅವರು ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಘಟಕಾಧಿಗಳು ವರ್ಗಾವಣೆಗೊಂಡ ಪಿಎಸ್‌ಐಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ನಿಯುಕ್ತಿಗೊಳಿಸಿರುವ ಸ್ಥಳಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Ad Widget . Ad Widget .

ಶಿವಪ್ಪ ಎಂ.ನಾಯ್ಕರ್‌-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್‌ಫೀಲ್ಡ್‌ ಠಾಣೆ, ರಮಾದೇವಿ ಬಿ.ಎಸ್‌.ಮಹದೇವಪುರ ಠಾಣೆ, ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್‌. ಪಾಟೀಲ್‌-ಆಡುಗೋಡಿ ಸಂಚಾರ ಠಾಣೆ, ವಿನೂತ್‌ ಎಚ್‌.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್‌ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಅದರಂತೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

Leave a Comment

Your email address will not be published. Required fields are marked *