January 2024

ಕಾಂಗ್ರೇಸನಿಂದ ಹಿಂದೂಗಳ ಮೇಲೆ ದಾಳಿ; ನಯನ ತಳವಾರ

ಸಮಗ್ರ ನ್ಯೂಸ್: ಕನ್ನಡದ ಪುಜಾರಿ, ಕಣ್ಮಣಿ, ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೇಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ. ಶ್ರೀರಾಮ ದೇವಸ್ಥಾನ ನಿರ್ಮಾಣ ವಿರೋದಿಸಿ ಪ್ರಾಣ ಪ್ರತಿಷ್ಠಾಪನೆ ಒಂದು ದಿನದ ರಜೆಯನ್ನು ನೀಡದೆ ಮಕ್ಕಳು, ಪೋಷಕರು ಮತ್ತು ಹಿಂದೂಗಳಿಂದ ಶಾಪ ಹಾಕಿಸಿಕೊಳ್ಳುತ್ತಿರುವ ಸಮಯದಲ್ಲೇ ಕನ್ನಡದಲ್ಲೇ ಮಂತ್ರ ಉಚ್ಚಾರಗಳನ್ನು […]

ಕಾಂಗ್ರೇಸನಿಂದ ಹಿಂದೂಗಳ ಮೇಲೆ ದಾಳಿ; ನಯನ ತಳವಾರ Read More »

ಜ.25ರಂದು ಕೊಡಗಿಗೆ ಸಿಎಂ ಭೇಟಿ| ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಪೊಲೀಸ್ ವರಿಷ್ಟ ಅಧಿಕಾರಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಭೂಮಿ ಪೂಜೆಯನ್ನು ನೆರವೇರಿಸಲು ಜ. 25ರಂದು ರಾಜ್ಯದ ಮುಖ್ಯಮಂತ್ರಿಗಳು ಕೊಡಗಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ವಿರಾಜಪೇಟೆಯ ಸೆಂಟೆನ್ಸ್ ಮೈದಾನದಲ್ಲಿ ವಿರಾಜ್ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಡೆಯಲಿದ್ದು, ನಂತರ ಮಡಿಕೇರಿಯಲ್ಲಿ ಆಯೋಜಿಸಲಾಗಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ

ಜ.25ರಂದು ಕೊಡಗಿಗೆ ಸಿಎಂ ಭೇಟಿ| ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5696 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 473 ಹುದ್ದೆಗಳು ಖಾಲಿ ಇವೆ. ಶೈಕ್ಷಣಿಕ ಅರ್ಹತೆ:ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ Read More »

ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ

ಸಮಗ್ರ ನ್ಯೂಸ್: ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆಯಾಗಿದೆ. ಜನವರಿ 20 ಕಾಣೆಯಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿಯೊಬ್ಬರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. 28-ವರ್ಷ ವಯಸ್ಸಿನ ದೀಪಿಕಾ ಅವರ ಮೃತ ದೇಹ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ವಿವಾಹಿತೆಯಾಗಿದ್ದ ದೀಪಿಕಾಗೆ 8-ವರ್ಷ ವಯಸ್ಸಿನ ಮಗ ಇದ್ದಾನೆ. ಕುಟುಂಬದ ಮೂಲಗಳ ಪ್ರಕಾರ ಮೃತ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶನಿವಾರದಂದು ಶಾಲೆಗೆ ಹೋಗಿದ್ದ

ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ Read More »

ಇಂದು ಪಿಎಸ್​ಐ ಮರು ಪರೀಕ್ಷೆ| 117 ಪರೀಕ್ಷಾ ಕೇಂದ್ರದಲ್ಲಿ ಭದ್ರತೆ

ಸಮಗ್ರ ನ್ಯೂಸ್: ಇಂದು 545 ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್​ಐ) ನೇಮಕಾತಿ ಮರು ಪರೀಕ್ಷೆಯು ನಡೆಯುತ್ತಿದ್ದು, ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈ ಹಿಂದೆ

ಇಂದು ಪಿಎಸ್​ಐ ಮರು ಪರೀಕ್ಷೆ| 117 ಪರೀಕ್ಷಾ ಕೇಂದ್ರದಲ್ಲಿ ಭದ್ರತೆ Read More »

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಬೆಂಗಳೂರು ಪೊಲೀಸರ ಈ ಎಚ್ಚರಿಕೆ ಫಲಕ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| ಏನಿದು ಸ್ಮಾರ್ಟ್ ಫೋನ್ ಝೋಂಬಿ?

ಸಮಗ್ರ ನ್ಯೂಸ್: ಬೆಂಗಳೂರಿನ ರಸ್ತೆಯೊಂದರಲ್ಲಿ ಕಂಡುಬಂದ ಆಕರ್ಷಕ ಸೂಚನಾ ಫಲಕವು ಅನೇಕ ನೆಟಿಜನ್‌ಗಳ ಗಮನ ಸೆಳೆಯಿತು. ಇತರ ಸೈನ್‌ಬೋರ್ಡ್‌ಗಳಿಗಿಂತ ಭಿನ್ನವಾಗಿ, ಈ ಬೋರ್ಡ್‌ನಲ್ಲಿ ‘ಸ್ಮಾರ್ಟ್‌ಫೋನ್ ಝೋಂಬಿಗಳ’ ವಿರುದ್ಧ ಎಚ್ಚರಿಕೆ ನೀಡುತ್ತದೆ. ನೀವು ಸರಿಯಾಗಿ ಓದಿದ್ದೀರಿ. ಇದರ ಚಿತ್ರವು ಎಕ್ಸ್‌ನಲ್ಲಿ ವೈರಲ್ ಆಗಿದೆ ಮತ್ತು ಬೋರ್ಡ್‌ನಲ್ಲಿರುವ ಸಂದೇಶವು ಇಂದಿನ ಸಮಯದಲ್ಲಿ ಹೇಗೆ ಬುದ್ಧಿವಂತ ಮತ್ತು ಪ್ರಸ್ತುತವಾಗಿದೆ ಎಂದು ಹೇಳಲು ಅನೇಕ ಜನ ಕಾಮೆಂಟ್ ಮಾಡಿದ್ದಾರೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಎಕ್ಸ್‌ ಹ್ಯಾಂಡಲ್ ಪ್ರಕೃತಿ ಅವರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರು ವ್ಯಕ್ತಿಗಳು

ಬೆಂಗಳೂರು ಪೊಲೀಸರ ಈ ಎಚ್ಚರಿಕೆ ಫಲಕ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| ಏನಿದು ಸ್ಮಾರ್ಟ್ ಫೋನ್ ಝೋಂಬಿ? Read More »

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…!

ಸಮಗ್ರ ನ್ಯೂಸ್: ಇಂದು ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆದಾಯಿತ್ತು, ಈ ಶುಭದಿನದ ಈ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಈ ನಾಮಕರಣ ಶಾಸ್ತ್ರ ನಡೆದಿದೆ. ಇಲ್ಲಿ ಮುಖ್ಯವಾಗಿ ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು.

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…! Read More »

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ

ಸಮಗ್ರ ನ್ಯೂಸ್: ಯುವಕ ಮಂಡಲ ಕೈಕಂಬ ವತಿಯಿಂದ ಕೈಕಂಬ ವೃತ್ತದಲ್ಲಿ ಅಯೋಧ್ಯೆ ಶ್ರೀ ರಾಮ ನ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಸಂಜೆ 7 ಗಂಟೆಗೆ ದೀಪೋತ್ಸವ ಹಾಗೂ ರಾಮತಾರಕ ಜಪದೊಂದಿಗೆ ಮಹಾ ಮಂಗಳಾರತಿ ನಡೆಯಿತು. ಈ ಸಂದರ್ಭದಲ್ಲಿ ಶಿವಪ್ರಸಾದ್ ನಡುತೋಟ ಹಾಗೂ ಪ್ರದೀಪ್ ಕಳಿಗೆ ಅವರು ನೆರೆದಿದ್ದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ನೆರೆದಿದ್ದ ಭಕ್ತರಿಗೆ ಸಿಹಿ ತಿಂಡಿ ಹಂಚಿ ನಂತರ ಸಿಡಿಮದ್ದು ಸಿಡಿಸಿ ಸಂಭ್ರಮಾಚರಿಸಲಾಯಿತು.

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ Read More »

ಜ.23ರಿಂದ ಭಕ್ತರ ಭೇಟಿಗೆ ಅಯೋಧ್ಯೆಗೆ ಮುಕ್ತ ಅವಕಾಶ| ಆರತಿ, ದರ್ಶನ ಪಾಸ್ ಪಡೆಯೋದು ಹೇಗೆ?

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ಸೋಮವಾರ ನಡೆದಿದ್ದು, ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಜ.22, ಸೋಮವಾರ ಉದ್ಘಾಟನೆಯಾಗಿರುವ ರಾಮ ಮಂದಿರವು ಜ.23, ಮಂಗಳವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಜನರು ರಾಮ ಲಲ್ಲಾನ ದರ್ಶನವನ್ನು ಪಡೆದುಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಈ ವೇಳೆ, ಬಾಲಿವುಡ್ ಗಣ್ಯರಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್, ಆಲಿಯಾ ಭಟ್, ರಣಬೀರ್ ಕಪೂರ್ ಹಾಗೂ ಉದ್ಯಮಿ ದಂಪತಿ ಮುಕೇಶ್ ಅಂಬಾನಿ, ನೀತಾ

ಜ.23ರಿಂದ ಭಕ್ತರ ಭೇಟಿಗೆ ಅಯೋಧ್ಯೆಗೆ ಮುಕ್ತ ಅವಕಾಶ| ಆರತಿ, ದರ್ಶನ ಪಾಸ್ ಪಡೆಯೋದು ಹೇಗೆ? Read More »