January 2024

ಜೈ ಶ್ರೀರಾಮ್ ಯಾರೊಬ್ಬರ ಸ್ವತ್ತಲ್ಲ – ಸಿಎಂ

ಸಮಗ್ರ ನ್ಯೂಸ್: ಸೀತಾರಾಮ ದೇವಾಲಯ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಸಮಾರಂಭದಲ್ಲಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು, ಜೈಶ್ರೀರಾಮ್‌ ಎನ್ನುವುದು ಯಾರೊಬ್ಬರ ಸ್ವತ್ತಲ್ಲ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದಿದ್ದಾರೆ. ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು […]

ಜೈ ಶ್ರೀರಾಮ್ ಯಾರೊಬ್ಬರ ಸ್ವತ್ತಲ್ಲ – ಸಿಎಂ Read More »

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ

ಸಮಗ್ರ ನ್ಯೂಸ್:ಜ 22; ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ Read More »

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ವೇಳೆ ಹೃದಯಾಘಾತ| ಐದು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಹಸನ್ಪುರ ತಹಸಿಲ್ನ ಹಥಿಯಾಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ತಾಯಿಯೊಂದಿಗೆ ಮಂಚದ ಮೇಲೆ ಕುಳಿತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡು ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಎಸೆದಳು. ಆಕೆಯ ಕುಟುಂಬವು ಅವಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿತು, ಆದರೆ ವೈದ್ಯರು ಅವಳು ಸತ್ತಿದ್ದಾಳೆ ಎಂದು ಘೋಷಿಸಿದ್ದಾರೆ. ಮೃತ ಬಾಲಕಿಯನ್ನು

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ವೇಳೆ ಹೃದಯಾಘಾತ| ಐದು ವರ್ಷದ ಮಗು ಸಾವು Read More »

ಶತಮಾನಗಳ ವನವಾಸ ಅಂತ್ಯ| ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ| ಬಾಲರಾಮನ ಪ್ರಾಣಪ್ರತಿಷ್ಟೆ ಪೂರ್ಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ

ಶತಮಾನಗಳ ವನವಾಸ ಅಂತ್ಯ| ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ| ಬಾಲರಾಮನ ಪ್ರಾಣಪ್ರತಿಷ್ಟೆ ಪೂರ್ಣ Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ

ಸಮಗ್ರ ನ್ಯೂಸ್: ಮಾನ್ಯ ರಾಜ್ಯಾಧ್ಯಕ್ಷರ ಮಾರ್ಗದರ್ಶನದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ವತಿಯಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ ಜ. 21ರಂದು ಸಲ್ಲಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು. ಮನವಿಯಲ್ಲಿ ಸಲ್ಲಿಸಿದ ವಿಷಯಗಳು:1)ಏಳನೇ ವೇತನ ಆಯೋಗದಿಂದ ವರದಿ ಪಡೆದು ಪರಿಷ್ಕೃತ ವೇತನ ಭತ್ಯಗಳನ್ನು 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ Read More »

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ

ಸಮಗ್ರ ನ್ಯೂಸ್: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಸುಳ್ಯದ ಶ್ರೀರಾಮ್ ಪೇಟೆಯಲ್ಲಿರುವ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಜ. 21ರಂದು ಶುಭಾರಂಭಗೊಂಡಿತು. ಸುಳ್ಯದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಎಸ್. ಅಂಗಾರ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀಹರಿ ಕಾಂಪ್ಲೆಕ್ಸ್ ನ ಮಾಲಕ ಕೃಷ್ಣ ಕಾಮತ್ ಅರಂಬೂರು, ಸುಳ್ಯ ಪ್ರೆಸ್

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ Read More »

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದ ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ಗೋಕುಲ ಸಂಕೀರ್ಣದಲ್ಲಿ ನಿರ್ಮಿಸಿರುವ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ.ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠರಾದ ಡಾ| ಮುರಲೀಮೋಹನ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ Read More »

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಪುತ್ತೂರು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರ ತಂದೆ ಪಿಎಲ್.ಡಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಹಸಂತಡ್ಕ ರಾಮ ಭಟ್ ಅವರು ಜ.21 ರಂದು ತಡ ರಾತ್ರಿ ನಿಧನರಾದರು. ರಾಮ ಭಟ್ ಅವರು ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾಗಿದ್ದು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ ಸುಮತಿ, ಪುತ್ರ ಮುರಳಿಕೃಷ್ಣ ಹಸಂತಡ್ಕ, ಪುತ್ರಿರಾದ ನಯನಾ ಶಂಕರಿ ಮತ್ತು ನೈಜೀರಿಯದಲ್ಲಿರುವ ಅಶ್ವಿನಿ ಶಂಕರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ Read More »

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ

ಸಮಗ್ರ ನ್ಯೂಸ್: ಇಂದು ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಇದರಲ್ಲಿ ಕರ್ನಾಟಕದ ಪಾಲು ಬಹು ಮಟ್ಟಿಗಿದೆ. ಅದರಲ್ಲೂ ಕರ್ನಾಟಕದಲ್ಲಿ ರಾಮ ಭಕ್ತರ ಕಲಾವಿದರು ರಾಮ ಮಂದಿರದ ಸ್ಥಬ್ದಚಿತ್ರಗಳನ್ನು ರಚಿಸುತ್ತಿದ್ದಾರೆ. ಇತ್ತೀಚೆಗೆ ಪೆನ್ಸಿಲ್ ಲೆಡ್​ನಲ್ಲಿ ರಾಮನ ಕೆತ್ತನೆ, ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಚಾಕು ಪೀಸ್ ನಲ್ಲಿ ಶ್ರೀರಾಮ, ಎಲೆಯಲ್ಲಿ ಶ್ರೀರಾಮ, ಜೈ ಶ್ರೀರಾಮ್ ಹೆಸರುಗಳಲ್ಲೇ ರಾಮನ ಚಿತ್ರ ಬಿಡಿಸಿರುವುದು ಸೇರಿದಂತೆ ಅನೇಕ ರೀತಿಯ ಚಿತ್ರಗಳನ್ನು ಬಿಡಿಸಲಾಗಿತ್ತು. ಆದರೆ ಇದೀಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ Read More »

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ ಸಿಲಿಂಡರ್​

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು Read More »