January 2024

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ,ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, […]

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ Read More »

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ

ಸಮಗ್ರ ನ್ಯೂಸ್: ನಮ್ಮ ನಾಡು ಕಂಡ ಮಹಾನ್ ವೈದ್ಯರಲ್ಲಿ ಡಾ ಮಂಜುನಾಥ ಒಬ್ಬರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ. ಎನ್. ಮಂಜುನಾಥ್ ಅವರ ಸೇವಾ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದು ಇಂದು ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರು 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ Read More »

ಬೆಂಗಳೂರಿನಲ್ಲಿ ಮಾಜಿ‌ ಪ್ರಧಾನಿ ದಿ.ರಾಜೀವ್ ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ| ರಾಜ್ಯದ ಅತೀ ದೊಡ್ಡ ಪ್ರತಿಮೆಗೆ ಬಿಜೆಪಿಯಿಂದ ವಿರೋಧ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಅವರ 15 ಅಡಿ ಎತ್ತರದ ಕಂಚಿನ ಪ್ರತಿಮೆ ಶೇಷಾದ್ರಿಪುರದಲ್ಲಿ ಅನಾವರಣಗೊಳ್ಳಲು ಸಿದ್ಧವಾಗಿದೆ.ರಾಜ್ಯದಲ್ಲೇ ಅತಿ ಎತ್ತರದ ರಾಜೀವ್‌ ಗಾಂಧಿ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ಜಂಕ್ಷನ್‌ಗಳ ಅಭಿವೃದ್ಧಿ ಯೋಜನೆಯಡಿ ಬಿಬಿಎಂಪಿ ನಗರದಲ್ಲಿ 25 ಜಂಕ್ಷನ್‌ಗಳನ್ನು ಅಭಿವೃದ್ಧಿ ಮಾಡುತ್ತಿದ್ದು, ಶೇಷಾದ್ರಿಪುರ, ಪ್ಲಾಟ್‌ಫಾರ್ಮ್‌ ರಸ್ತೆ ಹಾಗೂ ಸಂಪಿಗೆ ರಸ್ತೆ ಸೇರುವ ಜಂಕ್ಷನ್‌ನಲ್ಲಿ ‘ರಾಜೀವ್‌ ಗಾಂಧಿ ಸ್ಕ್ವೇರ್‌’ ನಿರ್ಮಿಸಲಾಗುತ್ತಿದೆ. ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮಾಜಿ‌ ಪ್ರಧಾನಿ ದಿ.ರಾಜೀವ್ ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ| ರಾಜ್ಯದ ಅತೀ ದೊಡ್ಡ ಪ್ರತಿಮೆಗೆ ಬಿಜೆಪಿಯಿಂದ ವಿರೋಧ Read More »

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ| ಫೆ.1ರಂದು‌ ಮಧ್ಯಂತರ ಬಜೆಟ್ ಮಂಡನೆ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್‌ ಅಧಿವೇಶನ ಬುಧವಾರ(ಜ.31) ಆರಂಭವಾಗಲಿದ್ದು, ಲೋಕಸಭಾ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್‌ ಮಂಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಜ್ಜಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಭಾಷಣ ಮಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ. ಈ ಬಜೆಟ್‌ನಲ್ಲಿ ದೊಡ್ಡ ಘೋಷಣೆಗಳು ಇರುವುದಿಲ್ಲ ಎಂದು ನಿರ್ಮಲಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ನೂತನ

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ| ಫೆ.1ರಂದು‌ ಮಧ್ಯಂತರ ಬಜೆಟ್ ಮಂಡನೆ Read More »

iQOO Neo 7 Pro ಮೇಲೆ 4 ಸಾವಿರ ಡಿಸ್ಕೌಂಟ್! ತಪ್ಪದೇ ನೋಡಿ

ಮಿಡ್‌ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ. ಅಮೆಜಾನ್ ಕೆಲವು ಮಾದರಿಗಳಲ್ಲಿ ಉತ್ತಮ ಕೊಡುಗೆಗಳನ್ನು ನೀಡುತ್ತಿದೆ. ಅದರಲ್ಲೂ ಚೈನೀಸ್ ಟೆಕ್ ಬ್ರ್ಯಾಂಡ್ IQ ನ ‘IQ Neo 7 Pro’ ಫೋನ್ ಬೆಲೆ ಭಾರೀ ಇಳಿಕೆಯಾಗಿದೆ. ಮಿಡ್‌ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ. ಅಮೆಜಾನ್ ಕೆಲವು ಮಾದರಿಗಳಲ್ಲಿ ಉತ್ತಮ ಕೊಡುಗೆಗಳನ್ನು ನೀಡುತ್ತಿದೆ. ಅದರಲ್ಲೂ ಚೈನೀಸ್ ಟೆಕ್ ಬ್ರ್ಯಾಂಡ್ IQ ನ ‘IQ Neo 7 Pro’ ಫೋನ್ ಬೆಲೆ ಭಾರೀ ಇಳಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬಿಡುಗಡೆಯಾದಾಗ ಇದರ

iQOO Neo 7 Pro ಮೇಲೆ 4 ಸಾವಿರ ಡಿಸ್ಕೌಂಟ್! ತಪ್ಪದೇ ನೋಡಿ Read More »

ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ|33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಈಗ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿದ್ದು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಈ

ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ|33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ Read More »

ಅಪಹರಣಕ್ಕೆ ಒಳಗಾಗಿದ್ದ 19ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಸಮಗ್ರ ನ್ಯೂಸ್: ಕಡಲ್ಗಳ್ಳರಿಂದ ಅಪಹರಣಕ್ಕೆ ಒಳಗಾಗಿದ್ದ 19 ಪಾಕ್ ನಾವಿಕರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಮೀನುಗಾರಿಕಾ ಹಡಗನ್ನು ಅಪಹರಿಸಿದ್ದರು. ಭಾರತೀಯ ಯುದ್ಧನೌಕೆ INS ಸುಮಿತ್ರಾ, 19 ಪಾಕಿಸ್ತಾನಿ ನಾವಿಕರನ್ನು ರಕ್ಷಿಸಿದೆ. 36 ಗಂಟೆಗಳಲ್ಲಿ ಯುದ್ಧನೌಕೆ ನಡೆಸಿದ 2ನೇ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ ಇದಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಇರಾನ್ ಧ್ವಜದ ಮೀನುಗಾರಿಕೆ ಹಡಗು ಎಫ್‌ವಿಅಲ್ ನಯೀಮಿಯನ್ನು 11 ಸಶಸ್ತ್ರ ಕಡಲ್ಗಳ್ಳರು ಹತ್ತಿದರು. ಅವರು 19 ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡಿದ್ದರು. ಭಾರತೀಯ

ಅಪಹರಣಕ್ಕೆ ಒಳಗಾಗಿದ್ದ 19ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ Read More »

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್

ಸಮಗ್ರ ನ್ಯೂಸ್: ಪುಷ್ಪಗಿರಿ ವಲಯದ ಕುಮಾರ ಪರ್ವತಕ್ಕೆ ಕಳೆದ ವಾರಾಂತ್ಯ ಚಾರಣಿಗರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಛಾಯಾಗ್ರಾಹಕ ಅನೂಪ್ ನರಿಯೂರು ಎಂಬ ಯುವಕ ಶೇರ್ ಮಾಡಿದ ವಿಡಿಯೋ ಅರಣ್ಯ ಸಚಿವರ ಗಮನ ಸೆಳೆದಿತ್ತು. ಈ ಹಿನ್ನಲೆಯಲ್ಲಿ ಚಾರಣ ನಿಯಂತ್ರಣಕ್ಕಾಗಿ ಫೆಬ್ರವರಿ 1ರಿಂದ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಆಕ್ಟೊಬರ್ ನಿಂದ ಆನ್ ಲೈನ್ ಬುಕ್ಕಿಂಗ್ ಆರಂಭಿಸಲು ಅರಣ್ಯ ಇಲಾಖೆ ಮಹತ್ವ ತೀರ್ಮಾನ ಕೈಗೊಂಡಿದೆ. ಚಾರಣಿಗರ ದಂಡೇ ಕುಮಾರ ಪರ್ವತದತ್ತ ಲಗ್ಗೆ ಇಟ್ಟಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದ

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್ Read More »

ವಿಮಾನ ಟೇಕಾಫ್ ಆಗುವಷ್ಟರಲ್ಲಿ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದ ವ್ಯಕ್ತಿ…!

ಸಮಗ್ರ ನ್ಯೂಸ್: ಬ್ಯಾಗ್​ನಲ್ಲಿ ಬಾಂಬ್ (Bomb Threat) ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದ ಘಟನೆ ಜ. 28ರಂದು ಸಂಜೆ ನಡೆದಿದೆ. ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ. ಕುಮಾರನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೇಸ್ತು ಬೀಳುವಂತಾಗಿತ್ತು. ಕೆಂಪೇಗೌಡ

ವಿಮಾನ ಟೇಕಾಫ್ ಆಗುವಷ್ಟರಲ್ಲಿ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದ ವ್ಯಕ್ತಿ…! Read More »

ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ… ಆಕ್ರೋಶದ ಬಳಿಕ ತೆರವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ವಿವಾದ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಾರಿಸಲಾದ ಹಸಿರು ಬಾವುಟವನ್ನು ಪೊಲೀಸರು, ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ವಿಕಾಸ್ ವಿಕ್ಕಿ ಎನ್ನುವರು ಟ್ವೀಟ್‌ ಮಾಡಿದ್ದರು. ಈ ಬಾವುಟ ಯಾವ ಧರ್ಮದ್ದು ಎಂದು ‘ಕೈ’ ನಾಯಕರು ಉತ್ತರಿಸಬೇಕು. ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ. ಹಿಂದೂ

ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ… ಆಕ್ರೋಶದ ಬಳಿಕ ತೆರವು Read More »