ಅಯೋಧ್ಯೆ ಶ್ರಿರಾಮ ಪ್ರಾಣಪ್ರತಿಷ್ಠೆಗೆ ತುಳುನಾಡಿನ ಪುರೋಹಿತ|ಅಪೂರ್ವ ಅವಕಾಶ ಪಡೆದ ಸುಳ್ಯದ ಡಾ.ಕೆ.ಗಣಪತಿ ಭಟ್
ಸಮಗ್ರ ನ್ಯೂಸ್: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರೊಬ್ಬರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕೆಮನಬಳ್ಳಿಯ ಶಾರದಾ ಮತ್ತು ಗೋಪಾಲಕೃಷ್ಣ ಭಟ್ ಅವರ ಪುತ್ರ ಪ್ರಸ್ತುತ ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಕೆ. ಗಣಪತಿ ಭಟ್ ಅವಕಾಶ ಪಡೆದುಕೊಂಡವರು. ಜ. 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಧಾರ್ಮಿಕ ವಿಧಿ ವಿಧಾನಗಳು […]