January 2024

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ/ ಇದೇ 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಕರ್ನಾಟಕದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದ್ದು, ಇದರ ಪೂರ್ವ ಸಿದ್ಧತೆಗಾಗಿ ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಜನವರಿ 21ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ […]

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ/ ಇದೇ 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ Read More »

ನಮ್ಮ ಮೆಟ್ರೋಗೆ ನೂತನ ಎಂಡಿ ನೇಮಕ

ಸಮಗ್ರ ನ್ಯೂಸ್: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ಮಾಡಿ ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದರು. ಇದೆಲ್ಲದರ ಬೆನ್ನಲ್ಲೇ ಇದೀಗ ಬಿಎಂಆರ್​ಸಿಎಲ್​ ನೂತನ ಎಂಡಿ ಆಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಲಾಗಿದೆ. ನಮ್ಮ ಮೆಟ್ರೋದ ಫೇಸ್-2 ಕಾಮಗಾರಿ ತುಂಬಾ ವಿಳಂಬ ಆಗುತ್ತಿದೆ.

ನಮ್ಮ ಮೆಟ್ರೋಗೆ ನೂತನ ಎಂಡಿ ನೇಮಕ Read More »

ಸರ್ಕಾರಿ ಉದ್ಯೋಗವನ್ನು ಹುಡುಕ್ತಾ ಇದ್ದೀರಾ? ಇಲ್ಲಿದೆ ಸುವರ್ಣವಕಾಶ!

ಸಮಗ್ರ ಉದ್ಯೋಗ: BPSC ನೇಮಕಾತಿ 2024 ಅಧಿಸೂಚನೆ: ಬಿಹಾರ ಸರ್ಕಾರದಲ್ಲಿ ಅಧಿಕಾರಿಗಳಾಗಲು ಬಯಸುವ ಯುವಕರಿಗೆ ಇದು ಉತ್ತಮ ಅವಕಾಶ. ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ಬ್ಲಾಕ್ ಅಗ್ರಿಕಲ್ಚರ್ ಆಫೀಸರ್ ಮತ್ತು ಇತರ ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಗಳನ್ನು ಹೊಂದಿರುವವರು BPSC bpsc.bih.nic.in ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 1051 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. BPSC ನೇಮಕಾತಿ 2024

ಸರ್ಕಾರಿ ಉದ್ಯೋಗವನ್ನು ಹುಡುಕ್ತಾ ಇದ್ದೀರಾ? ಇಲ್ಲಿದೆ ಸುವರ್ಣವಕಾಶ! Read More »

ಜನವರಿ 16ರಂದು ಬೆಂಗಳೂರಿನಲ್ಲಿ ಲಾರಿ ಮುಷ್ಕರ|ಏನಿರುತ್ತೆ, ಏನಿರಲ್ಲ?

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಹಿಟ್ ಐಂಡ್ ರನ್ ಕಾನೂನು ರೂಲ್ಸ್ ಜಾರಿಗೆ ಮುಂದಾಗಿದೆ. ಈಗ ಕೇಂದ್ರ ಸರ್ಕಾರ ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್ ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಜ.16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ತಿಳಿಸಿದ್ದಾರೆ. ಕೇಂದ್ರದ ಹಿಟ್​​​ ಆ್ಯಂಡ್​​​ ರನ್​​​ ಕಾಯ್ದೆಯನ್ನ ನಾವು ಖಂಡಿಸ್ತಿದ್ದೇವೆ. ಈ ಕಾಯ್ದೆಯಿಂದ ಲಾರಿ ಮಾಲೀಕ, ಚಾಲಕರಿಗೆ ತೊಂದರೆ ಆಗುತ್ತೆ. ಕಾಯ್ದೆಯಡಿ

ಜನವರಿ 16ರಂದು ಬೆಂಗಳೂರಿನಲ್ಲಿ ಲಾರಿ ಮುಷ್ಕರ|ಏನಿರುತ್ತೆ, ಏನಿರಲ್ಲ? Read More »

ಆದರ್ಶ ಗ್ರಾಮ ಬಳ್ಪದ ಅಭಿವೃದ್ಧಿ ದೇಶಕ್ಕೆ ಮಾದರಿ| ಕೇಂದ್ರ ಸಚಿವ ಭಗವಂತ ಖೂಬಾ ಶ್ಲಾಘನೆ

ಸಮಗ್ರ ನ್ಯೂಸ್: ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,‌ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು. ಅವರು ಬುಧವಾರ ಕಡಬ ತಾಲೂಕಿನ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ -2024 ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕುಗ್ರಾಮದಲ್ಲೂ ಕಡುಬಡವರ ಅಭಿವೃದ್ಧಿಗಾಗಿ ಸಂಸದರ ಆದರ್ಶ

ಆದರ್ಶ ಗ್ರಾಮ ಬಳ್ಪದ ಅಭಿವೃದ್ಧಿ ದೇಶಕ್ಕೆ ಮಾದರಿ| ಕೇಂದ್ರ ಸಚಿವ ಭಗವಂತ ಖೂಬಾ ಶ್ಲಾಘನೆ Read More »

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಮಂಜುನಾಥನಿಗೆ (45) ಗ್ರಾಮದ ಮಹಿಳೆಯರು ಮತ್ತು ಪುರುಷರು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಏಟು ಹಾಕಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಆರೋಪಿಯನ್ನ ಬಂಧಿಸಲು ಆಗ್ರಹಿಸಲಾಗಿದ್ದು, ಸ್ಥಳಕ್ಕೆ ರಾಣೇಬೆನ್ನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ Read More »

4 ಗಂಟೆ ಪಾರ್ಟ್ ಟೈಮ್ ಜಾಬ್ ಮಾಡಿ, 750 ರೂಪಾಯಿ ಗಳಿಸಿ!

ಸಮಗ್ರ ಉದ್ಯೋಗ: ನಿಮಗೆ ಕಡಿಮೆ ಸಮಯದಲ್ಲಿ ಪ್ರಾಮಾಣಿಕವಾಗಿ ದುಡಿದು ಚೆನ್ನಾಗಿ ಗಳಿಸಬೇಕು ಆಸೆ ಇರಬಹುದಲ್ಲ, ಖಂಡಿತ ಎಲ್ಲರಿಗೂ ಹೀಗೊಂದು ಇಚ್ಛೆ ಇದ್ದೇ ಇರುತ್ತೆ. ಪ್ರಾಮಾಣಿಕವಾಗಿ ಹಣ ಗಳಿಸುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ! ಅದರಲ್ಲೂ ವಿದ್ಯಾರ್ಥಿಗಳು, ಯುವಕ-ಯುವತಿಯರಿಗೆ ಒಂದೊಳ್ಳೆ ಅವಕಾಶವೊಂದು ಹುಟ್ಟಿಕೊಂಡಿದೆ. ಹೌದು, ಇಂತಹ ಹೊಸ ಅವಕಾಶವೊಂದು ಅಗತ್ಯವುಳ್ಳವರಿಗೆ ತೆರೆದುಕೊಂಡಿದೆ. ನೀವು ಮಾಡಬೇಕಿರುವುದು ಇಷ್ಟೇ, ಬೆಂಗಳೂರಿನ ಪಾರ್ಕ್, ಹೋಟೆಲ್ ಸೇರಿದಂತೆ ಜನದಟ್ಟಣೆಯ ಪ್ರದೇಶಗಳಲ್ಲಿ ಕನ್ನಡ ಪುಸ್ತಕಗಳನ್ನು ಮಾರುವುದು! ಬೆಳಗ್ಗೆ ಆರೂವರೆಯಿಂದ ಹತ್ತೂವರೆ ತನಕ ಪುಸ್ತಕದ ಸ್ಟಾಂಡ್ ಇಟ್ಟು

4 ಗಂಟೆ ಪಾರ್ಟ್ ಟೈಮ್ ಜಾಬ್ ಮಾಡಿ, 750 ರೂಪಾಯಿ ಗಳಿಸಿ! Read More »

ಸೋಮರವಾರಪೇಟೆ: ಮಾನವೀಯತೆ ಮೆರೆದ ಕರವೇ

ಸಮಗ್ರ ನ್ಯೂಸ್: ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ವಯಸ್ಸಾದ ವೃದ್ಧರನ್ನು ಬೆಂಗಳೂರು ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸುವ ಮೂಲಕ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಹಂಡ್ಲಿ ಗ್ರಾ.ಪಂ. ಮತ್ತು ಗ್ರಾ.ಪಂ. ಸದಸ್ಯ ವೀರೇಂದ್ರ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯವರು ಮಾನವೀಯತೆ ಮೆರೆದಿದ್ದಾರೆ. ಎರಡು ವರ್ಷದಿಂದ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ವಯಸ್ಸಾದ ವೃದ್ದನನ್ನು(70) ಗಮನಿಸಿ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆಗೆ ತಿಳಿಸಿ ಅವರನ್ನು ಅನಾಥಾಶ್ರಮಕ್ಕೆ ಸೇರಿಸುವಂತೆ ಕೇಳಿಕೊಂಡಿದ್ದರು. ಅದರಂತೆ ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಫ್ರಾನ್ಸಿಸ್ ಡಿಸೋಜರವರು

ಸೋಮರವಾರಪೇಟೆ: ಮಾನವೀಯತೆ ಮೆರೆದ ಕರವೇ Read More »

ಕುಕ್ಕೆ ಸುಬ್ರಹ್ಮಣ್ಯ: ಜ.12ರಿಂದ ಕಿರುಷಷ್ಟಿ ಮಹೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನ ದಲ್ಲಿ ಜ. 16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ ಎಸ್‌. ಸುಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಜ. 16ರಂದು ಪೂರ್ವಾಹ್ನ ದೇವಾಲಯ ಆಡಳಿತ ದರ್ಮದರ್ಶಿಗಳ ಚಿಂತನ ಸಭೆ ಗುಡಿ-ಜನರ ಜೀವನಾಡಿ ಶ್ರೀ ಕಾರ್ತಿಕ ವೇದಿಕೆಯಲ್ಲಿ ನಡೆಯಲಿದೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ಜ.12ರಿಂದ ಕಿರುಷಷ್ಟಿ ಮಹೋತ್ಸವ Read More »

‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ | ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿದ ನಳಿನ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿಲುವನ್ನು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ x ‘ ನಲ್ಲಿ ಪ್ರತಿಕ್ರಿಯಿಸಿದ್ದು,”ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದರು. ಮಂದಿರದ ನಿರ್ಮಾಣಕ್ಕೆ ಅಡ್ಡಿಮಾಡಲು ಎಲ್ಲ ಕುತಂತ್ರಗಳನ್ನು ಮಾಡಿದರು. ಈಗ ಆಹ್ವಾನ ನೀಡಿದರೂ ರಾಮನ ಪ್ರಾಣಪ್ರತಿಷ್ಠಾಪನಾ ಪುಣ್ಯಕಾರ್ಯಕ್ಕೆ ಬರಲು ನಿರಾಕರಿಸಿದ್ದಾರೆ. ಓಲೈಕೆ ರಾಜಕಾರಣಕ್ಕಾಗಿ ಆತ್ಮವನ್ನೇ ಮಾರಿಕೊಂಡ ಕಾಂಗ್ರೆಸ್ಸಿಗರಿಂದ ಇನ್ನೇನು ನಿರೀಕ್ಷಿಸಬಹುದು!” ಎಂದು ಬರೆದು ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. ಜನವರಿ 22ರಂದು

‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ | ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿದ ನಳಿನ್ Read More »