ಸಿನಿಮಾ ಶೈಲಿಯಲ್ಲಿ ಕಾರಿನಲ್ಲೆ ವಿವಾಹವಾದ ಪ್ರೇಮಿಗಳು… ಸಾಂತ್ವನ ಕೇಂದ್ರದಲ್ಲಿ ಕುಟುಂಬಸ್ಥರ ನಡುವೆ ವಾಗ್ವಾದ
ಸಮಗ್ರ ನ್ಯೂಸ್: ಸಿನಿಮೀಯ ಶೈಲಿಯಲ್ಲಿ ಪ್ರೇಮಿಗಳು ಕಾರಿನಲ್ಲಿ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದಾರೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ ಮೂಲದ ಯುವತಿ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವಕ ಕೆಳಜಾತಿಗೆ ಸೇರಿದ್ದಾನೆ ಎಂಬ ಕಾರಣಕ್ಕೆ ಪೋಷಕರು ಮಗಳ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರೇಮಿಗಳು ಮಂಗಳವಾರ ಸಂಜೆ ಓಡಿ ಹೋಗಿ ಸಿರುಗುಪ್ಪ ನಗರದಲ್ಲಿ ಕಾರಿನಲ್ಲಿ ಹಾರ ಬದಲಾಯಿಸಿಕೊಂಡು ವಿವಾಹವಾಗಿದ್ದಾರೆ. ಬಳಿಕ ತೆಕ್ಕಲುಕೋಟೆ ಠಾಣೆಗೆ ಬಂದು ರಿಜಿಸ್ಟರ್ ಮದುವೆ ಮಾಡಿಸಿ ಎಂದು ಪೊಲೀಸರ […]