ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ಕಾಸರಕೋಡು ಮೀನುಗಾರರ ಬಂದರು ಬಳಿ ಹೈಡ್ರಾಮಾ ನಡೆದಿದ್ದು, ಹೊನ್ನಾವರ ತಾಲೂಕಿನ ಕಾಸರಕೋಡು ಬಳಿ ಚತುಷ್ಪಥ ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿದ್ರೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪ್ರತಿಭಟನೆ ಹತ್ತಿಕ್ಕಲು 200ಕ್ಕೂ ಹೆಚ್ಚು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಹಾಗೂ ಪುರುಷರಿಗೆ ಸೇರಿದಂತೆ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.
ಹೊನ್ನಾವರ ಸಮೀಪ ನಿರ್ಮಾಣ ಆಗುತ್ತಿರುವ ಹೊಸ ಬಂದರಿಗೆ ಹೋಗಲು 4 ಲೈನ್ ರಸ್ತೆ ನಿರ್ಮಾಣಕ್ಕೆ ಸರ್ವೆ ಕಾರ್ಯ ಆರಂಭಿಸಲಾಗಿದೆ. ಇದರಿಂದ ಮನೆ ಕಳೆದುಕೊಳ್ಳುವ ಭೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಒಂದು ವೇಳೆ ಮನೆಗಳಿಗೆ ಬೇರೆಡೆ ಜಾಗ ನೀಡಿದರೆ,ನಮ್ಮ ಮೀನುಗಾರಿಕೆಗೆ ಸಮಸ್ಯೆ ಆಗುತ್ತದೆ. ಈ ಹಿನ್ನಲೆ ಮನೆ ಇರುವ ಕಡೆ ರಸ್ತೆ ನಿರ್ಮಿಸದಂತೆ ಮೀನುಗಾರರು ಒತ್ತಾಯಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ 25 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸ್ಥಳದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ಅಳವಡಿಸಲಾಗಿದೆ.
ಈ ಕುರಿತು ಮಾತನಾಡಿದ ಅಧಿಕಾರಿಗಳು ‘ಮುಂದಿನ ನಾಲ್ಕು ದಿನಗಳಲ್ಲಿ ಸರ್ವೇ ಕಾರ್ಯ ಮುಗಿಸುತ್ತೆವೆ. ಆದಷ್ಟು ಬೇಗ ರಸ್ತೆ ನಿರ್ಮಾಣ ಮಾಡಬೇಕಿದೆ ಎಂದರು. ಸ್ಥಳಕ್ಕೆ ಭಟ್ಕಳ ಎಸಿ ಡಾ ನಯನಾ ಹಾಗೂ ತಹಶೀಲ್ದಾರ್ ಭೇಟಿ ನೀಡಿ ಎಷ್ಟೆ ಹೇಳಿದರೂ ಕೇಳದ ಮೀನುಗಾರರು, ನಾವು ಈ ಜಾಗ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಾರೆ ಈ ಜಾಗದಲ್ಲಿ 200 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.