ಸಮಗ್ರ ನ್ಯೂಸ್: ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಕಾಂಟ್ರವರ್ಸಿಗಳಿಂದ ಫೇಮಸ್ ಆದವರು. ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ.
ಕ್ಯಾನ್ಸರ್ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ಪೂನಂ ಪಾಂಡೆ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಲಾಗಿದೆ.
ಇವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು.







