Ad Widget .

ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆ ಸರಳಗೊಳ್ಳಲಿದ್ದು, ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಪಡೆದುಕೊಳ್ಳಬಹುದು.

Ad Widget . Ad Widget .

ಇದಕ್ಕೆ ಅನುಕೂಲವಾಗುವಂತೆ 2023- 24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರಕಾರ ಘೋಷಿಸಿದ್ದಂತೆ ಹಿಂದೂ ವಿವಾಹಗಳ ನೋಂದಣಿ (ತಿದ್ದುಪಡಿ) ನಿಯಮ-2024ವನ್ನು ಸಂಪುಟ ಸಭೆ ಅನುಮೋದಿಸಿದೆ.

Ad Widget . Ad Widget .

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆಗಾಗಿ ಉಪ ನೋಂದಣಾಧಿಕಾರಿ ಕಚೇರಿ ಮುಂದೆ ನಿಲ್ಲಬೇಕಾಗಿಲ್ಲ. ಕಾವೇರಿ-2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೆ ಗ್ರಾಮ ಪಂಚಾಯತ್ ಗಳ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್‌ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

Leave a Comment

Your email address will not be published. Required fields are marked *