ಸಿಎಂ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಲೋಕಸಭೆ ಚುನಾವಣೆಗೆ ತಯಾರಿಗಳು ನಡೆಯುತ್ತಿವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ಸಂಪುಟ ಸಚಿವರ ಡಿನ್ನರ್ ಮೀಟಿಂಗ್ ಮಾಡಲಾಗಿದೆ. ಲೋಕಸಭೆ ಚುನಾವಣೆ ವಿಚಾರವಾಗಿ ಅನೌಪಚಾರಿಕವಾಗಿ ಚರ್ಚೆ ಮಾಡುವ ಸಾಧ್ಯತೆಗಳಿದ್ದು, ಮುಂದಿನ ಚುನಾವಣಾ ತಂತ್ರಗಾರಿಕೆ, ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಕೆರಳಿಸಿದೆ

. Ad Widget . Ad Widget

ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ, ಸರ್ಕಾರಕ್ಕೆ ಡ್ಯಾಮೆಜ್ ಆಗುವ ರೀತಿ ಸಚಿವರು ಹೇಳಿಕೆ ನೀಡಬಾರದು. ಲೋಕಸಭೆ ಚುನಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಚರ್ಚೆ, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸಲು ತಯಾರಿ, ಕಾರ್ಯಕರ್ತರ ಆತ್ಮವಿಶ್ವಾಸ ದ್ವಿಗುಣಗೊಳಿಸಿ ಚುನಾವಣೆಗೆ ಸಜ್ಜುಗೊಳಿಸಲು ತಂತ್ರಗಾರಿಕೆ ಹೀಗೆ ಲೋಕಾ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಲವು ಅಂಶಗಳನ್ನ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.

. Ad Widget . . Ad Widget . Ad Widget

ಡಿನ್ನರ್ ಮೀಟಿಂಗ್​​ನಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಕೆ ಪಾಟೀಲ್, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ

Leave a Comment

Your email address will not be published. Required fields are marked *