ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛ ಗೊಳಿಸುವ ಪ್ರಕರಣ ಇವತ್ತು ನಿನ್ನೆದಲ್ಲ, ಈ ಹಿಂದೆ ಇಂತಹದೆ ಪ್ರಕರಣ ನಡೆದಿತ್ತು ಅದು ಮಾಸುವ ಮುನ್ನ ಮತ್ತೊಂದು ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ ಈ ಆದೇಶವನ್ನು ಧಿಕ್ಕರಿಸಿ ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್ ಮಾಡಿಸಿದ್ದಾರೆ. ವಿದ್ಯಾರ್ಥಿನಿ ಶೌಚಾಲಯ ಕ್ಲೀನ್ ಮಾಡುತ್ತಿದ್ದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಘಟನೆಗೆ ಕಾರಣವಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಇದೀಗ ಆಗ್ರಹಿಸಿದ್ದಾರೆ.
ಅದ್ರೆ ಪ್ರಕರಣ ಮುಚ್ಚಿ ಹಾಕಲು ಶಿಕ್ಷಕ ಆಂಜನೇಯ ರೆಡ್ಡಿ ಪ್ರಯತ್ನ ಮಾಡಿದ್ದು ವಿದ್ಯಾರ್ಥಿನಿ ಕೈಯಿಂದ ಸ್ವತಃ ತಾನೆ ಟಾಯ್ಲೆಟ್ ಸ್ವಚ್ಛಗೊಳಿಸಿದ್ದಾಗಿ ವಿದ್ಯಾರ್ಥಿನಿ ಹೇಳಿದ್ದ ವಿಡಿಯೋವು ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗಿದ್ದು, ಶಾಲಾ ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹವಾಗಿದೆ.







