Ad Widget .

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ವೃದ್ಧ ಬಲಿ| ಮಾಲೆನಾಡಿಗರಲ್ಲಿ ಹೆಚ್ಚಿದ ಆತಂಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದಲ್ಲಿ 79 ವರ್ಷದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.

Ad Widget . Ad Widget .

ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಕೊನೆಯುಸಿರೆಳೆದಿದ್ದಾರೆ. ರೆಡ್ ಝೋನ್​ನಲ್ಲಿ ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ಈ ಸಾವಿನಿಂದ ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.

Ad Widget . Ad Widget .

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು ಕಳೆದ 10 ದಿನಗಳಲ್ಲಿ ಬರೊಬ್ಬರಿ 21 ಜನರಿಗೆ ಸೋಂಕು ತಗುಲಿದ್ದು, ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿ ಮನೆ ಮಾಡಿದೆ. ಇನ್ನು ಈ ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲವಾಗಿದೆ. ಸೊಂಕು ಪ್ರಕರಣ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಾದ ಮಂಗನ ಕಾಯಿಲೆಗೆ ಆರೋಗ್ಯ ಇಲಾಖೆಯಲ್ಲಿ ಲಸಿಕೆ ಲಭ್ಯವಿಲ್ಲ. ಜಿಲ್ಲೆಯಲ್ಲಿ‌ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದೆ. ಇದೀಗ ಜಿಲ್ಲಾಡಳಿತ ಕಾಯಿಲೆ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ ಮಂಗನ ಕಾಯಿಲೆ ಆತಂಕ ಕಾಡುತ್ತಿದೆ

Leave a Comment

Your email address will not be published. Required fields are marked *