ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು| ಮೂವರು ದುರ್ಮರಣ

ಸಮಗ್ರ ನ್ಯೂಸ್: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರು ಹಳ್ಳಕ್ಕೆ ಬಿದ್ದುದರಿಂದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ.

Ad Widget ... ..

ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರಾಗಿದ್ದು, ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *