Ad Widget .

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ ಪಾಂಡೆ

ಸಮಗ್ರ ನ್ಯೂಸ್: ವಿವಾದಗಳ ಮೂಲಕವೇ ಸುದ್ದಿ ಆಗಿರುವ ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ನಿನ್ನೆ ವೈರಲ್ ಆಗಿತ್ತು. ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ.

Ad Widget . Ad Widget .

ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು. ಆದರೆ, ಇಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ. ತಾವು ಬದುಕಿರುವುದಾಗಿ ಅವರು ಹೇಳಿದ್ದಾರೆ.

Ad Widget . Ad Widget .

ಸುಳ್ಳು ಸುದ್ದಿ ಹಬ್ಬಿಸಿಕೊಳ್ಳಲು ಒಂದು ಕಾರಣವೂ ಇದೆಯಂತೆ. ಅದುವೇ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು! ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ಏನೇ ಆದರೂ ಸಾವಿನ ವಿಚಾರದಲ್ಲಿ ಈ ರೀತಿ ಮಾಡಬಾರದು ಎಂದು ಅನೇಕರು ನಟಿಗೆ ಹೇಳಿದ್ದಾರೆ

Leave a Comment

Your email address will not be published. Required fields are marked *