Ad Widget .

ಕೇಂದ್ರ ಸರ್ಕಾರದಿಂದ ಹುದ್ದೆಗೆ ಆಹ್ವಾನ, 2.80 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್​ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್/ ಡೆಪ್ಯುಟಿ ಜನರಲ್ ಮ್ಯಾನೇಜರ್-10
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್ -1

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂ.ಟೆಕ್, ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್​/ಐಟಿ/ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಎಂಸಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 61 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್/ ಡೆಪ್ಯುಟಿ ಜನರಲ್ ಮ್ಯಾನೇಜರ್- ಮಾಸಿಕ ₹ 80,000-2,80,000
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್ -ಮಾಸಿಕ ₹ 1,00,000-2,80,000

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ಜನರಲ್ ಮ್ಯಾನೇಜರ್ (HR)
ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್
TCIL ಭವನ
ಗ್ರೇಟರ್ ಕೈಲಾಶ್-I
ನವದೆಹಲಿ-110048

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *